ಬೆಳಗಾವಿ ಸುದ್ದಿ ಲೋಕ ಗೋಕಾಕ: ಗೋಕಾಕ ತಾಲೂಕಿನ ಮಾನಿಕವಾಡಿಯಲ್ಲಿ ಗಾದಿ ಕಾರ್ಖಾನೆ ಗುರುವಾರ ಸಾಯಂಕಾಲ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ಬೊಜ್ಗರ ಎನ್ನುವವರಿಗೆ ಸೇರಿದ ಕಾರ್ಖಾನೆ ಇದಾಗಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾರ್ಖಾನೆಯವರು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದರು. ಆ ವೇಳೆಗೆ ಬಹುತೇಕ ಗಾದಿಗಳು ಹಾಗೂ ಹತ್ತಿ ಮೊದಲಾದ ಸಾಮಗ್ರಿಗಳು ಸುಟ್ಟು ಹೋಗಿದ್ದವು. ದಟ್ಟ ಹೊಗೆ ಆವರಿಸಿತ್ತು ಎಂದು ಮಾಹಿತಿ ಲಭ್ಯವಾಗಿದೆ.
ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.