ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಚುನವಾಣೆ ನಡೆಯಲಿದೆ ಎಂದು ಘೋಷಿಸಿದ್ದಾರೆ.

ಫೆಬ್ರವರಿ 8ರಂದು ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.